ಬೆಂಗಳೂರು, ಆ 20 (DaijiworldNews/HR): ಮಹದಾಯಿ ಮತ್ತು ಕಾವೇರಿ ನೀರು ವಿಚಾರವಾಗಿ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 23 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದರು.
ಇನ್ನು ಎರಡೂವರೆ ವರ್ಷ ಆದ್ಮೇಲೆ ಸಚಿವ ಸ್ಥಾನ ಬಿಟ್ಟುಕೊಡಬೇಕೆಂಬ ಮುನಿಯಪ್ಪ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಡಿಕೆಶಿ, ಪಾರ್ಟಿ, ಹೈಕಮಾಂಡ್ ಏನ್ ಹೇಳುತ್ತೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾವು ಯಾರು ಅದನ್ನ ಬಹಿರಂಗವಾಗಿ ಚರ್ಚೆ ಮಾಡುವ ವಿಷಯವಲ್ಲ. ಮುಂದಿನ ವಾರ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಾರೆ, ಅವರ ಬಳಿ ಮಾತನಾಡುತ್ತೇವೆ ಎಂದಿದ್ದಾರೆ