ಬೆಂಗಳೂರು, ಆ 21(DaijiworldNews/MS): ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದಿನಿಂದ 2ನೇ ಪೂರಕ ಪರೀಕ್ಷೆಗಳು ನಡೆಯಲಿವೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈ ರೀತಿ 2ನೇ ಅವಕಾಶ ನೀಡಿದ್ದು, 1.20 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ನಡೆಯಲಿದೆ. ಸೆ.2ಕ್ಕೆ ಪರೀಕೆ ಮುಕ್ತಯವಾಗಲಿದೆ.
ಪರೀಕ್ಷಾ ಮಂಡಳಿಯು ಪರೀಕ್ಷೆ ನಡೆಸಲು ಪ್ರಶ್ನೆಪತ್ರಿಕೆ, ಪರೀಕ್ಷಾ ಕೇಂದ್ರ, ಮೂಲ ಸೌಕರ್ಯ ಸೇರಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.