ಮಹಾರಾಷ್ಟ್ರ, ಎ09(SS): ಸ್ವಾತಂತ್ರ್ಯಕ್ಕೂ ಮುನ್ನ ಕಾಂಗ್ರೆಸ್ ಮುಖಂಡರು ಬುದ್ಧಿವಂತಿಕೆಯಿಂದ ವರ್ತಿಸಿದ್ದರೆ ಪಾಕಿಸ್ತಾನ ರಚನೆಯಾಗುತ್ತಿರಲೇ ಇಲ್ಲ. ಪಾಕಿಸ್ತಾನ ರಚನೆಯಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕೂ ಮುನ್ನ ಕಾಂಗ್ರೆಸ್ ಮುಖಂಡರು ಬುದ್ಧಿವಂತಿಕೆಯಿಂದ ವರ್ತಿಸಿದ್ದರೆ ಪಾಕಿಸ್ತಾನ ರಚನೆಯಾಗುತ್ತಿರಲೇ ಇಲ್ಲ. ಪಾಕಿಸ್ತಾನದ ಭಾಷೆಯಂತೆಯೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಆಶ್ವಾಸನೆ ಕೊಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಪ್ರಧಾನಮಂತ್ರಿ ಬೇಕು ಎನ್ನುವವರ ಬೆಂಬಲಕ್ಕೆ ಕಾಂಗ್ರೆಸ್ ಮತ್ತು ಎನ್ ಸಿಪಿ ನಿಂತಿದೆ ಎಂದು ಹೇಳಿದ್ದಾರೆ.
ಯಾರು ಬಾಲಕೋಟ್ ಮೇಲೆ ವೈಮಾನಿಕ ದಾಳಿ ನಡೆಸಿದ್ದಾರೋ ಅವರಿಗೆ ನೀವು ನಿಮ್ಮ ಮೊದಲ ಮತವನ್ನು ಹಾಕಬೇಕು ಎಂದು ಈ ಬಾರಿಯ ಯುವ ಹಾಗೂ ಮೊದಲ ಮತದಾರರಲ್ಲಿ ವಿನಂತಿಸಿಕೊಂಡರು.