ಬೆಂಗಳೂರು, ಆ 21 (DaijiworldNews/SM): ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ ಮತ್ತು ಕುಂಕುಮ ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆ ಮೂಲಕ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾಗಿದೆ. ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀ ಕೃಪಾಕಟಾಕ್ಷವು ಲಭಿಸಲೆಂದು ಈ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಆದೇಶಿಸಲಾಗಿದೆ.