ಬೆಂಗಳೂರು, ಆ 22 (DaijiworldNews/HR): ನಾವು ಒತ್ತಡದ ಮೇಲೆ ಯಾರನ್ನೂ ಸೆಳೆಯುತ್ತಿಲ್ಲ. ಆಪರೇಷನ್ ಹಸ್ತ ಕೂಡ ಮಾಡುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಶವು ಐದು ವರ್ಷ ಸ್ಥಿರ ಸರ್ಕಾರ ನೀಡಲಿದೆ ಎಂಬ ನಂಬಿಕೆ ಹೊಂದಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಕಡೆ ಬರುತ್ತಿದ್ದಾರೆ. ಯಾರನ್ನು ಪಕ್ಷಕ್ಕೆ ತೆಗೆದುಕೊಳ್ಳಬೇಕೆಂಬುದನ್ನ ಸಿಎಂ, ಡಿಸಿಎಂ ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.
ಇನ್ನು ರಾಜಕೀಯ, ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಕಡೆ ಬರುವ ಪರಿಸ್ಥಿತಿ ಇರಬಹುದು. ಬಹಳಷ್ಟು ಜನರಿಗೆ ನಮ್ಮ ಜೊತೆಗೆ ಸೇರಿಕೊಳ್ಳಬೇಕು ಎಂಬ ಮನಸ್ಸಿದೆ ಎಂದು ಹೇಳಿದ್ದಾರೆ.