ಬೆಂಗಳೂರು, ಆ 23 (DaijiworldNews/MS): ರಾಜ್ಯಾದ್ಯಾಂತ ಮುಂಗಾರು ತೀರಾ ದುರ್ಬಲವಾಗಿದ್ದು, ಕೆಲವೆಡೆ ಮಾತ್ರ ಲಘು ಮಳೆಯಾಗುತ್ತಿದೆ.
ತಾಪಮಾನ ಏರಿಕೆಯಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಅಲ್ಲಿಯವರೆಗೆ ಮೋಡ - ಬಿಸಿಲನ ಆಟ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಆಗಸ್ಟ್ 29ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ