ಶಿವಮೊಗ್ಗ, ಆ 23 (DaijiworldNews/AK): ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೆನೆʼ ಎಂದು ಮಾಜಿ ವಿಧಾನ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿದ್ದೆ. ನಾಳೆ ನಾನು ನನ್ನ ಸ್ನೇಹಿತರ ಜೊತೆ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು. ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು. ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ಮೀರಿ ದುಡಿಯುವ ನಿಲುವನ್ನು ಹೊಂದಿದ್ದೇನೆ . ಮುಂಬರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.