ಚಿತ್ರದುರ್ಗ,ಏ09(AZM):ಒಬ್ಬ ಸಂಸದನನ್ನು ನೋಡಿ ಆಯ್ಕೆ ಮಾಡದೇ ದೇಶದ ರಕ್ಷಣೆಗಾಗಿ ಬಲಿಷ್ಠ ನಿರ್ಣಯ ತೆಗೆದುಕೊಳ್ಳುವ ಸರ್ಕಾರಕ್ಕೆ ಮತನೀಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ್ದಾರೆ.
ಬಿಜೆಪಿ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಆಗಮಿಸಿದ ನರೇಂದ್ರ ಮೋದಿಯವರು ಕಾರ್ಯಕರ್ತರನ್ನು ಉದ್ದೇಶಿಸಿ ಈ ಕುರಿತು ಮಾತನಾಡಿದರು. ಬಾಲಕೋಟ್ ಮೇಲಿನ ವಾಯು ದಾಳಿಯಿಂದ ಪಾಕಿಸ್ತಾನಕ್ಕೆ ನೋವು ಉಂಟಾದರೆ, ಇಲ್ಲಿನ ಜೆಡಿಎಸ್ ಮತ್ತು ಕಾಂಗ್ರೆಸ್ ತುಂಬಾನೇ ನೋವಾಗಿದೆ ಎಂದು ಹೇಳಿದರು.
ಕಿಸಾನ್ ಸಮ್ಮಾನ್ ಯೋಜನೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದ ಎಲ್ಲ ರೈತರಿಗೆ ವಿಸ್ತರಿಸುತ್ತೇವೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಾ ಬಂದರೂ ಇದೂವರೆಗೂ ಯಾವ ರೈತರ ಸಾಲಮನ್ನಾ ಮಾಡಿಲ್ಲ. ಬದಲಾಗಿ ರೈತರ ಮನೆಗಳಿಗೆ ಬ್ಯಾಂಕ್ ಗಳಿಂದ ನೋಟಿಸ್ ಬರುತ್ತಿದೆ ಅಂತ ಅವರು ದೂರಿದರು.
ಇನ್ನು ಕಾಂಗ್ರೆಸ್ ಜಾತಿ ಹೊಡೆಯುವ ಕೆಲಸ ಮಾಡುತ್ತಿದೆ. ಲಿಂಗಾಯತ ಧರ್ಮವನ್ನು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಬೇಕಾ ನಮಗೆ. ತುಷ್ಠೀಕರಣದ ರಣ ನೀತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಂದಾಗಿದೆ. ಇವರಿಗೆ ದೇಶದ ಚಿಂತನೆ ಇಲ್ಲ ಅಂಥ ಹೇಳಿದರು. 2ಜಿ, ಹೆಲಿಕಾಪ್ಟರ್ ಹಗರಣ ಮಾಡಿರುವವರಿಗೆ ಶಿಕ್ಷೆ ಪಕ್ಕಾ. ಅವರ ಅನ್ಯಾಯವನ್ನು ಹೊರಗೆಳೆಯಲು ನೀವು ನನಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡರು.