ಮೈಸೂರು, ಆ 24 (DaijiworldNews/HR): ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬಂದರೆ ಸ್ವಾಗತ ಕೋರುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ಸು ನೋಡಿ ಅವರೇ ನಿರ್ಧಾರ ಮಾಡುತ್ತಿದ್ದಾರೆ. ಎಷ್ಟು ಜನ ಬರುತ್ತಾರೆ ಎಂದು ಈಗಲೇ ನಾನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾಲ, ಸಮಯ, ಘಳಿಗೆ ಎಂಬುದು ಇರುತ್ತದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.
ಇನ್ನು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ. ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ಹೇಳಿದ್ದಾರೆ.