ನವದೆಹಲಿ, ಆ 25 (DaijiworldNews/AK): ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರ ಸೆಪ್ಟೆಂಬರ್ 01 ಸುಪ್ರೀಂಕೋರ್ಟ್ ಮುಂದೂಡಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ . ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಅಭಿಪ್ರಾಯ ಪಟ್ಟಿದೆ.
ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.