ಬೆಂಗಳೂರು,ಆ 26 (DaijiworldNews/AK): ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಸಿಎಂ ಜೊತೆ ಹೆಬ್ಬಾರ್ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ಇದು ರಾಜಕೀಯದಲ್ಲಿ ಮೊತ್ತೊಂದು ಚರ್ಚೆಗೆ ಗ್ರಾಸವಾಗಿದೆ.
ಯಲ್ಲಾಪುರ – ಮುಂಡಗೋಡ – ಶಿರಸಿ ಭಾಗದ ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಪರೇಷನ್ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿತ್ತು. ಈ ಕುರಿತು ಶಿವರಾಮ್ ಹೆಬ್ಬಾರ್ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.