ನವದೆಹಲಿ, ಆ 26 (DaijiworldNews/AK):ಸೂಕ್ಷ್ಮ ಮಾಹಿತಿ ಸೋರಿಕೆಯಾಗುವ ಹಿನ್ನಲೆ ಸಮವಸ್ತ್ರ ಧರಿಸಿದ ಫೋಟೊಗಳನ್ನು ಹಾಗೂ ರೀಲ್ಸ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡದಂತೆ ಕೇಂದ್ರೀಯ ಮೀಸಲು ಪಡೆಗಳಿಗೆ ಸೂಚನೆ ನೀಡಲಾಗಿದೆ.ಜೊತೆಗೆ ಅಪರಿಚಿತರೊಡನೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕಿಸದಂತೆ ಸೂಚಿಸಲಾಗಿದೆ.
ಸಮವಸ್ತ್ರದಲ್ಲಿ ಸೂಕ್ಷ್ಮ ಸ್ಥಳಗಳಿಂದ ವೀಡಿಯೋ ಮತ್ತು ಫೋಟೊಗಳನ್ನು ಮೀಸಲು ಪಡೆಯ ಹಲವು ಯೋಧರು ಅಪ್ಲೋಡ್ ಮಾಡುತ್ತಿದ್ದಾರೆ. ಹೀಗಾಗಿ ಇದು ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಭದ್ರತಾ ಪಡೆಗಳಿಗೆ ಆಯಾ ವಿಭಾಗದ ಮುಖ್ಯಸ್ಥರಿಂದ ಈ ಸೂಚನೆ ನೀಡಲಾಗಿದೆ.
ಸಿಆರ್ಪಿಎಫ್, ಬಿಎಸ್ಎಫ್, ಐಟಿಬಿಪಿ, ಸಿಐಎಸ್ಎಫ್ ಸೇರಿದಂತೆ ಎಲ್ಲಾ ಮೀಸಲು ಪಡೆಗಳಿಗೆ ಈ ಸೂಚನೆ ರವಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ನಲ್ಲಿ ಸೈನಿಕರು ಸಮವಸ್ತ್ರದಲ್ಲಿ ತಮ್ಮ ಪೋಟೋ ಹಾಗೂ ವೀಡಿಯೊಗಳನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಆಯಾ ವಿಭಾಗದ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.