ಅಮೃತಸರ, ಆ 26 (DaijiworldNews/AK): ಗ್ಯಾಂಗ್ಸ್ಟರ್ ಕಮಲ್ ಬೋರಿ ಜೊತೆಗೆ ಪಂಜಾಬ್ನ ಅಮೃತಸರದ ಪೊಲೀಸರು ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಶುಕ್ರವಾರ ಈ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಏಳು ಜನ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.
ಈ ಪಾರ್ಟಿಯಲ್ಲಿ ಐವರು ಇನ್ಸ್ಪೆಕ್ಟರ್ಗಳು ಮತ್ತು ಇಬ್ಬರು ಪೊಲೀಸ್ ಉಪ ಅಧೀಕ್ಷಕರು ಹಾಡುತ್ತ ಕುಣಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಪಟಿಯಾಲ ಮತ್ತು ಬಟಿಂಡಾಗೆ ವರ್ಗಾವಣೆ ಮಾಡಲಾಗಿದೆ. ಗ್ಯಾಂಗ್ ಸ್ಟರ್ ಕಮಲ್ ಬೋರಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳಿದ್ದು, ಪೊಲೀಸರು ಆತನನ್ನು ಕೂಡ ಬಂಧಿಸಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.