ಬೆಂಗಳೂರು, ಆ 27 (DaijiworldNews/HR): ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅಕ್ರಮ ಆರೋಪಗಳ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ’ಕುನ್ಹಾ ನೇತೃತ್ವದಲ್ಲಿ ವಿಚಾರಣ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಪ್ರಕಟಿಸಿದೆ.
ನ್ಯಾ| ಡಿ’ಕುನ್ಹಾ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ ನಡೆಸಿ ಅವರಿಗೆ ಶಿಕ್ಷೆ ನೀಡಿದ ದಿಟ್ಟ ನ್ಯಾಯಾಧೀಶ ಎಂದೇ ಖ್ಯಾತರಾದವರು.
ಇನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ವ್ಯಕ್ತವಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕಮಿಷನ್ ಆಫ್ ಎನ್ಕ್ವಯರಿ ಆ್ಯಕ್ಟ್ ಅನ್ವಯ ವಿಚಾರಣ ಆಯೋಗ ರಚಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಜಿ ಸಚಿವ ಡಾ| ಸುಧಾಕರ್ ಅವರನ್ನು ಈ ಮೂಲಕ ಕಾಂಗ್ರೆಸ್ ಸರಕಾರ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ.