ನವದೆಹಲಿ, ಆ 27 (DaijiworldNews/AK): ಚಂದ್ರಯಾನ 3 ರ ಯಶಸ್ಸಿನ ಹಿಂದೆ ಮಹಿಳೆಯರ ಕೆಲಸ ತುಂಬಾ ಇದೆ, ಅಸಾಧ್ಯವಾದುದ್ದನ್ನು ಸಾಧ್ಯವೆಂದು ತೋರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
104ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಚಂದ್ರಯಾನ 3 ರ ಯಶಸ್ಸು ನಾರಿ ಶಕ್ತಿಗೆ ಜೀವಂತ ಉದಾಹರಣೆ. ಚಂದ್ರಯಾನ 3 ರಲ್ಲಿ ಹಲವು ಮಂದಿ ಮಹಿಳಾ ವಿಜ್ಞಾನಿಗಳು ಹಾಗೂ ಎಂಜಿನಿಯರ್ಗಳು ಕೆಲಸ ಮಾಡಿದ್ದಾರೆ ಎಂದರು.
ಚಂದ್ರಯಾನ ಮಿಷನ್ ನವ ಭಾರತದ ಚೈತನ್ಯದ ಸಂಕೇತವಾಗಿದೆ. ಆಗಸ್ಟ್ 23 ರಂದು ಚಂದ್ರಯಾನ ಎಂಬ ಸಂಕಲ್ಪದ ಸೂರ್ಯ ಚಂದ್ರನ ಮೇಲೆ ಉದಯಿಸಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಂದಿನ ತಿಂಗಳ ಜಿ20 ಶೃಂಗಸಭೆಗೆ ಭಾರತ ಸಿದ್ಧವಾಗಿದೆ. 40 ದೇಶಗಳ ಮುಖ್ಯಸ್ಥರು ಭಾರತಕ್ಕೆ ಬರುತ್ತಿದ್ದಾರೆ. ಭಾರತದ ಆಹ್ವಾನದ ಮೇರೆಗೆ ಮಾತ್ರ ಆಫ್ರಿಕನ್ ರಾಷ್ಟ್ರಗಳ ಮುಖ್ಯಸ್ಥರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದರು.