ಮುಂಬೈ, ಆ 27 (DaijiworldNews/HR): ಮುಂಬೈನಲ್ಲಿ ಸಿಬಿಐ ದಾಳಿ ನಡೆಸಿದ ಒಂದು ದಿನದ ನಂತರ ಕಸ್ಟಮ್ಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಕಸ್ಟಮ್ಸ್ ಅಧಿಕಾರಿಯನ್ನು ಮಯಾಂಕ್ ಸಿಂಗ್ ಎಂದು ಗುರುತಿಸಲಾಗಿದೆ.
ಸಿಬಿಐ ಅಧಿಕಾರಿಗಳು ಆಗಸ್ಟ್ 24 ರಂದು ಮಯಾಂಕ್ ಸಿಂಗ್ ಅವರ ವಿರುದ್ಧ ದಾಖಲಾದ ಭ್ರಷ್ಟಾಚಾರದ ಪ್ರಕರಣವನ್ನು ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಸಿಂಗ್ ಅವರು ಎರಡು ಕಂಪನಿಗಳಿಂದ ಕಸ್ಟಮ್ಸ್ ಇಲಾಖೆಯಲ್ಲಿ ಬಾಕಿ ಇರುವ ಎರಡು ಬಿಲ್ಗಳನ್ನು ತೆರವುಗೊಳಿಸಲು ಲಂಚ ಪಡೆದ ಆರೋಪ ಹೊತ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಂಬೈ ಪೊಲೀಸ್ ಕಮಿಷನರ್ ಮಿಲಿಂದ್ ಭರಾಂಬೆ ಅವರು ನೀಡಿದ ಮಾಹಿತಿಯ ಪ್ರಕಾರ, ಕಸ್ಟಮ್ಸ್ ಅಧಿಕಾರಿಗಳ ಸಾವು ಆತ್ಮಹತ್ಯೆ ಎಂದು ತೋರುತ್ತದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಮೃತರು ಬರೆದಿದ್ದಾರೆ ಎನ್ನಲಾದ ಸೂಸೈಡ್ ನೋಟ್ ಕೂಡ ಪತ್ತೆಯಾಗಿದೆ.