ಕೊಚ್ಚಿ, ಆ 28 (DaijiworldNews/HR): ಕೊಚ್ಚಿಯಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ, ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಇಳಿಸಿರುವ ಘಟನೆ ಸೋಮವಾರ ನಡೆದಿದೆ.
ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಕರೆ ಬರುತ್ತಿದ್ದಂತೆಯೇ ವಿಮಾನ ಪ್ರಯಾಣಕ್ಕೆ ಸಿದ್ಧವಾಗಿದ್ದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಕೆಳಗಿಳಿಸಿ, ಹೆಚ್ಚಿನ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ಯಲಾಯಿತು.
ಇನ್ನು ಪೊಲೀಸ್ ತಂಡದ ಪ್ರಾಥಮಿಕ ತನಿಖೆಯ ನಂತರವಷ್ಟೇ ಮತ್ತಷ್ಟು ವಿವರಗಳು ಲಭ್ಯವಾಗಲಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.