ಬೆಂಗಳೂರು, ಆ 28 (DaijiworldNews/SM): ಮುಂದಿನ 15 ದಿನಗಳವರೆಗೂ ಪ್ರತಿದಿನ ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ತಮಿಳುನಾಡಿಗೆ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಇಂದು ವರ್ಚುಯಲ್ ಮೂಲಕ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಪ್ರಮಾಣದ ಬಗ್ಗೆ ಚರ್ಚೆ ನಡೆಸಲಾಯಿತು. ಎರಡು ರಾಜ್ಯಗಳ ವಾಸ್ತವ ಪರಿಸ್ಥಿತಿ ಲೆಕ್ಕಾಹಾಕಿ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಕರ್ನಾಟಕ, ತಮಿಳುನಾಡು ಅಧಿಕಾರಿಗಳು ಮತ್ತು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.