ಕೋಲ್ಕತ್ತಾ, ಆ 29 (DaijiworldNews/HR): ಬಿಜೆಪಿ ಪಕ್ಷವು ಈಗಾಗಲೇ ಸಮುದಾಯಗಳ ನಡುವೆ ವೈಷಮ್ಯ ಉಂಟು ಮಾಡುವ ಕೆಲಸ ಮಾಡುತ್ತಿದೆ. ಒಂದು ವೇಳೆ ಸತತ ಮೂರನೇ ಬಾರಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶವನ್ನು ದ್ವೇಷದಿಂದ ತುಂಬಿಸುತ್ತಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಒಂದು ವೇಳೆ ಸತತ ಮೂರನೇ ಬಾರಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದರೆ ದೇಶವು ನಿರಂಕುಶ ಅಧಿಕಾರವನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಮುಂದಿನ ಲೋಕಸಭೆ ಚುನಾವಣೆಯನ್ನು ಬಿಜೆಪಿಯು ಡಿಸೆಂಬರ್ ಅಥವಾ ಮುಂದಿನ ಜನವರಿ ತಿಂಗಳಲ್ಲಿ ನಡೆಸಬಹುದು ಎಂಬ ಆತಂಕವಿದೆ ಎಂದರು.
ಇನ್ನು ಲೋಕಸಭೆ ಚುನಾವಣೆಯನ್ನು ಅವಧಿಗೆ ಮುನ್ನವೇ ಮಾಡಲು ಬಿಜೆಪಿ ಮುಂದಾಗಿದೆ ಎಂದ ಅವರು, ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿಯು ಎಲ್ಲಾ ಹೆಲಿಕಾಪ್ಟರ್ ಗಳನ್ನು ಮುಂಗಡ ಕಾಯ್ದಿರಿಸಿಕೊಂಡಿದೆ ಎಂದು ಹೇಳಿದ್ದಾರೆ.