ಮಂಡ್ಯ, ಆ 29 (DaijiworldNews/MS): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಕಾವೇರಿ ನದಿ ನಿಯಂತ್ರಣ ಸಮಿತಿ ಮತ್ತೆ ಸೂಚನೆ ನೀಡಿರುವ ಹಿನ್ನೆಲೆ ಮಂಡ್ಯ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಹೋರಾಟ ಭುಗಿಲೆದ್ದಿದ್ದು, ರೈತರು ಇಂದು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಇಂದಿನಿಂದ 15 ದಿನಗಳವರೆಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಬಿಡಲು ರಾಜ್ಯಕ್ಕೆ ಸೂಚಿಸಿರುವುದನ್ನು ರೈತರು ವಿರೋಧಿಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಿರುವ ರೈತರು ನಂತರ 12 ಗಂಟೆಗೆ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಜತೆಗೆ ಕೆಆರ್ಎಸ್ನಲ್ಲಿಯೂ ರೈತ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.
ಮಧ್ಯಾಹ್ನ ಸಿಡಬ್ಲ್ಯೂಎಂಎ ಸಭೆ ದೆಹಲಿಯಲ್ಲಿ ನಡೆಯಲಿದೆ. ಕಾವೇರಿ ನೀರು ನಿರ್ವಹಣೆಯಲ್ಲಿ ಪರಮೋಚ್ಚ ಅಧಿಕಾರ ಪ್ರಾಧಿಕಾರಕ್ಕಿದೆ. ಅಲ್ಲಿ ಎಷ್ಟು ನೀರು ಬಿಡಬೇಕು ಎಂಬ ಬಗ್ಗೆ ಅಂತಿಮ ಆದೇಶವಾಗಲಿದೆ.