ಮೈಸೂರು, ಆ 29 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣವಾಗಿಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದರು.
ಇನ್ನು ನಾವು ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮೀ ಯೋಜನೆಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದಿದ್ದಾರೆ.