ನವದೆಹಲಿ, ಆ 29 (DaijiworldNews/HR): ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದು ಪಡಿಸಲು ಸಿಆರ್ಪಿಎಫ್ ಯೋಧರ ಮೇಲೆ ಪುಲ್ವಾಮಾದಲ್ಲಿ ನಡೆದ ದಾಳಿಯೇ ಪ್ರೇರಣೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಜಮ್ಮು ಕಾಶ್ಮೀರದ ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಆರ್ಟಿಕಲ್ 35(ಎ) ನಂತಹ ನಿಬಂಧನೆಗಳಿಂದಾಗಿ ಜಮ್ಮು ಕಾಶ್ಮೀರದ ನಿವಾಸಿಗಳು ಮೂಲಭೂತ ಹಕ್ಕುಗಳನ್ನು ಸಂಪೂರ್ಣವಾಗಿ ಆನಂದಿಸಲು ಸಾಧ್ಯವಾಗಲಿಲ್ಲ. ಹಿಂದಿನ ತಪ್ಪನ್ನು ಸರಿಪಡಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.