ಬೆಂಗಳೂರು, ಆ 30 (DaijiworldNews/MS): ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗ್ಗಿನ ಜಾವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಹೆಚ್ಡಿ ಕುಮಾರಸ್ವಾಮಿಯವರಿಗೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಕೂಡ ಇತ್ತು. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು.