ಪುಣೆ, ಆ 30 (DaijiworldNews/MS): ಪುಣೆಯ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ವೇರ್ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್ವಾಡ್ನ ಪೂರ್ಣನಗರ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ವೇರ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ದುರಂತ ಸಂಭವಿಸಿದ್ದು ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ.
ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ" ಎಂದು ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೋರೇಶನ್ನ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಕಿಯ ತೀವ್ರತೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.