ಬೆಂಗಳೂರು, ಆ 30 (DaijiworldNews/AK): ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ದೊರೆಯಲಿದ್ದು, ಗಣ್ಯರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸಂಸದ ರಾಹುಲ್ ಗಾಂಧಿ ಅವರನ್ನು ಮುಖ್ಮುಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವರಾದ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.