ಶ್ರೀನಗರ, ಸೆ 02 (DaijiworldNews/HR): ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಉಗ್ರರನ್ನು ಫಿರ್ದೌಸ್ ಅಹ್ಮದ್ ವಾನಿ ಮತ್ತು ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.
ಇಬ್ಬರೂ ಘಾಟ್ ಮತ್ತು ಭಾರತ್ ಗ್ರಾಮದವರು ಎನ್ನಲಾಗಿದ್ದು, ಇವರಿಬ್ಬರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ.
ಇನ್ನು 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.