ಬೆಳಗಾವಿ, ಸೆ 03 (DaijiworldNews/HR): ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ಪ್ರಾರಂಭವಾಗಿದೆ ಎನ್ನಲಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಶೀತಲ ಸಮರಕ್ಕೆ ಕಾರಣ ಮಕ್ಕಳ ರಾಜಕೀಯ ಭವಿಷ್ಯ ಎನ್ನಲಾಗಿದ್ದು, ತಮ್ಮ ಮಕ್ಕಳಿಗೆ ಬೆಳಗಾವಿ ಎಂಪಿ ಟಿಕೆಟ್ ಕೊಡಿಸಲು ಇಬ್ಬರು ನಾಯಕರು ಹಠಕ್ಕೆ ಬಿದ್ದಿದ್ದಾರೆ ಎಂದು ವರದಿಯಾಗಿದೆ.
ಇನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಪುತ್ರ ಮೃನಾಲ್ ಹೆಬ್ಬಾಳ್ಕರ್ಗೆ ಟಿಕೆಟ್ ಕೊಡಿಸಲು ಸಿದ್ದತೆ ಮಾಡಿಕೊಂಡಿದ್ದು, ಇತ್ತ ಸಾಹುಕಾರ್ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಾರನ್ನ ಲೋಕಸಮರದ ಕಾಂಗ್ರೆಸ್ ಹುರಿಯಾಳು ಮಾಡಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.