ಉತ್ತರ ಪ್ರದೇಶ,ಸೆ 15(DaijiworldNews/AK): ಗ್ರೇಟರ್ ನೋಯ್ಡಾದ ದಲ್ಲಿ ವಸತಿ ಸಂಕೀರ್ಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಲಿಫ್ಟ್ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಗೌರ್ ನಗರದಲ್ಲಿ ಆಮ್ರಪಾಲಿ ಬಿಲ್ಡರ್ಸ್ನಿಂದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ಧ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆಯಲ್ಲಿ 5ಮಂದಿ ಗಾಯಗೊಂಡ ಗಂಬೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.