ಬೆಂಗಳೂರು, ಸೆ 16 (DaijiworldNews/HR): ಕಾಂಗ್ರೆಸ್ ಸರಕಾರಕ್ಕೆ ತಾಕತ್ತು, ಧಮ್ಮು ಇದ್ದರೆ ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ದಮ್ಮಿನ ಬಗ್ಗೆ ಮಾತನಾಡುತ್ತಾರೆ. ನಿಮಗೆ ತಾಕತ್ತು ದಮ್ ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂ ಕೋರ್ಟ್ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರದಲ್ಲಿ ರಾಜ್ಯ ಸರಕಾರ ಕೊಟ್ಟ ಮಾತು ಬದಲಾಯಿಸುತ್ತಿದ್ದು, ಇದೊಂದು ಊಸರವಳ್ಳಿ ಸರಕಾರ ಎಂದು ಆರೋಪಿಸಿದ್ದಾರೆ.
ಇನ್ನು ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರದ ಮೇಲೆ ತಮಿಳುನಾಡಿನ ಪ್ರಭಾವ ಇದ್ದ ಹಾಗೆ ಇದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲುಎಂಎ ಸಭೆ ಆಗಿಲ್ಲ ಆದರೂ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.