ಹೊಸದಿಲ್ಲಿ, ಸೆ 20 (DaijiworldNews/AK): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ" ಎಂದು ಹೇಳಿದರು.
"ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು. ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.