ಕೇರಳ, ಸೆ 22 (DaijiworldNews/HR): ನಿಫಾ ವೈರಸ್ನ ಹೊಸ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ಕೇರಳದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಕೇರಳದ 9 ಗ್ರಾಮ ಪಂಚಾಯ್ತಿಗಳಲ್ಲಿ ಕಂಟೈನ್ಮೆಂಟ್ ವಲಯಗಳನ್ನು ನಿರ್ಮಿಸಲಾಗಿದ್ದು, ಇದೀಗ ಪ್ರಕರಣಗಳು ವರದಿಯಾಗದ ಹಿನ್ನಲೆಯಲ್ಲಿ ಈ ನಿರ್ಬಂಧಗಳನ್ನು ಕೋಯಿಕ್ಕೋಡ್ ಜಿಲ್ಲಾಡಳಿತ ಗುರುವಾರ ಹಿಂತೆಗೆದುಕೊಂಡಿದೆ.
ಇನ್ನು ಕೋಯಿಕ್ಕೋಡ್ನಲ್ಲಿಇಲ್ಲಿಯವರೆಗೆ 6 ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಫಾ ವೈರಸ್ ಲಕ್ಷಣಗಳೆಂದರೆ ಜ್ವರ, ಮೈ ಕೈ ನೋವು, ಸ್ನಾಯುಗಳ ನೋವು, ತಲೆನೋವು, ಸುಸ್ತು, ವಾಂತಿ. ನಿಫಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಅದೇ ರೀತಿ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ ಎನ್ನಲಾಗಿದೆ.