ನವದೆಹಲಿ, ಸೆ 22 (DaijiworldNews/AK):ಸನಾತನ ಧರ್ಮದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂಬ ಹೇಳಿಕೆಗಳ ಕುರಿತು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ಉದಯನಿಧಿ ಸ್ಟಾಲಿನ್ಗೆ ನೋಟಿಸ್ ನೀಡಿದೆ.
ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.
ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದರು.