ಬೆಂಗಳೂರು, ಸೆ 22 (DaijiworldNews/MS): ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ, ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೆ. 15 ರಿಂದ ಇಲ್ಲಿಯವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಕರ್ನಾಟಕದಲ್ಲೂ ನಿಫಾ ವೈರಸ್ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಿಫಾ ವೈರಸ್ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಂದು ಕ್ಯಾಬಿನೆಟ್ ಸಭೆ ನಡೆಸಲಿದ್ದು, ನಮ್ಮ ರೈತರ ಹಿತ ನಮಗೆ ಮುಖ್ಯ. ಹೀಗಾಘಿ ಈ ವಿಚಾರದಲ್ಲಿ ರಾಜಕೀಯ ಬೇಡ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.