ಬೆಂಗಳೂರು, ಸೆ 22 (DaijiworldNews/AK): ಲೋಕಸಭೆ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದನ್ನು ಕಾಂಗ್ರೆಸ್ ಪಕ್ಷ ವ್ಯಂಗ್ಯ ಮಾಡಿದೆ. . ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಇಂದು ಅಧಿಕೃತವಾಗಿ ಎನ್ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ.
ಇನ್ಮುಂದೆ ಜೆಡಿಎಸ್ ಪಕ್ಷವು ತನ್ನ ಹೆಸರಿನ ಮುಂದಿರುವ ‘ಸೆಕ್ಯೂಲರ್’ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ JD ಎಂದು ಇಟ್ಟುಕೊಳ್ಳಬಹುದು. ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು. ಕೆ.ಡಿ. ಅಂದರೆ ಅಪಾರ್ಥ ಬೇಡ! ಕೆ.ಡಿ. ಅಂದರೆ ಕಮಲ ದಳ! ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ ಅಭಿನಂದನೆಗಳು ಎಂದು ಕಾಂಗ್ರೆಸ್ ಟೀಕೆ ಮಾಡಿದೆ.