ಬೆಂಗಳೂರು, ಸೆ 24 (DaijiworldNews/HR): ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಕರ್ನಾಟಕದ 28 ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ.
28 ಮಂದಿ ಸಚಿವರಿಗೆ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸೂಚನೆ ನೀಡಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಇನ್ನು ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ.