ಬೆಂಗಳೂರು, ಸೆ 26 (DaijiworldNews/MS): ಮೇಕೆದಾಟು ಯೋಜನೆ ಸಮಸ್ಯೆ ಇತ್ಯರ್ಥದಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದುಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು.ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಹೇಳಿದ್ದಾರೆ.
, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ. ಜನರ ಹಿತಕ್ಕಾಗಿ ಹೋರಾಟ, ಪ್ರತಿಭಟನೆ, ಬಂದ್ ಮಾಡಲಿ, ಆದರೆ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.