ಜಾರ್ಖಂಡ್, ಏ.12(AZM): ಸತ್ತು ಹೋದ ಹೋರಿಯ ಮಾಂಸವನ್ನು ಕತ್ತರಿಸಿದ ಎನ್ನುವ ಕಾರಣಕ್ಕಾಗಿ ಆದಿವಾಸಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪ್ರಕಾಶ್ ಲಾಕ್ರಾ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಇತರ ಮೂವರಿಗೆ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಜುರ್ಮಿ ಎಂಬ ಗ್ರಾಮದಲ್ಲಿ ನಡೆದಿದ್ದು, ನಾಲ್ಕು ಜನರು ಸತ್ತ ಹೋರಿಯ ಮಾಂಸ ಕತ್ತರಿಸುತ್ತಿದ್ದಾಗ ಗುಂಪೊಂದು ಅವರ ಮೇಲೆ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡವೊಂದನ್ನು ರಚಿಸಲಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.