ಬೆಂಗಳೂರು, 02 (DaijiworldNews/HR): ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದರು.
ಇನ್ನು ಟಿಪ್ಪು ಭಾವಚಿತ್ರ ಪ್ರದರ್ಶನದಿಂದ ಘಟನೆವಾಗಿದೆ ಎಂದು ಹೇಳುತ್ತಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟವಾಗಿದೆ. ನಾನು ಜನಪ್ರತಿನಿಧಿಯಾಗಿ ನನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕೆಲಸವಾಗುತ್ತಿದೆ ಎಂದಿದ್ದಾರೆ.
ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಗಳು ಮಾಡುತ್ತಾರೆ. ಕಾನೂನು ಮೀರಿ ಹೋದವರ ಕ್ರಮ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.