ಶಿಕಾರಿಪುರ, ಅ 02 (DaijiworldNews/HR): ಈದ್ ಮಿಲಾದ್ ರ್ಯಾಲಿಯಲ್ಲಿ ಶಾಂತಿಕದಡಲು ಪ್ರಯತ್ನಿಸಲಾಗಿದ್ದು, ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗದಲ್ಲಿ ಹತ್ತಿರುವ ಕಿಡಿ ರಾಜ್ಯಕ್ಕೆ ಹಬ್ಬಿದರೂ ಆಶ್ಚರ್ಯವಿಲ್ಲ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗ ಪೋಲಿಸರು ಈದ್ ಮಿಲಾದ್ ರ್ಯಾಲಿಗೆ ಒಳ್ಳೆಯ ಭದ್ರತೆ ನೀಡಿದ್ದರು. ಇದರ ನಡುವೆಯೂ ಶಾಂತಿ ಕದಡುವ ಕೆಲಸ ನಡೆದಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು ಎಂದರು.
ಶಿವಮೊಗ್ಗದಲ್ಲಿ ಕಲ್ಲು ತೂರಾಟ ಹೊಸದಲ್ಲ ಎಂಬ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದರ ಅರ್ಥ ಯಾರು ಬೇಕಾದ್ರು ಕಲ್ಲು ತೂರಾಟ ನಡೆಸಬಹುದು ಅಂತನಾ? ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇಂತಹ ಹೇಳಿಕೆಗಳಿಂದ ಅವರೇ ಪರ್ಮಿಷನ್ ಕೊಟ್ಟಹಾಗೆ ಆಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.