ಸಿಕ್ಕಿಂ, ಅ 04 (DaijiworldNews/MS): ಸಿಕ್ಕಿಂನ ಲಾಚೆನ್ ಕಣಿವೆಯ ಬಳಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 23 ಸೇನಾ ಸಿಬ್ಬಂದಿ ಬುಧವಾರ ಬೆಳಗ್ಗೆ ನಾಪತ್ತೆಯಾಗಿದ್ದಾರೆ.
ಹಠಾತ್ ಪ್ರವಾಹದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಸಿಂಘ್ಥಾಮ್ ಬಳಿಯ ಬರ್ದಂಗ್ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ, ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು, ಇದರಿಂದಾಗಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ. ಎಂದು ಅಧಿಕಾರಿಗಳು ಹೇಳಿದ್ದಾರೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ.
ಘಟನೆಗೆ ಸಂಬಂಧಿಸಿ ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ದೂರ ಉಳಿಯುವಂತೆ ಜನರನ್ನು ಜನರಿಗೆ ಎಚ್ಚರಿಕೆ ನೀಡಿದೆ.