ಬೆಂಗಳೂರು,05 (DaijiworldNews/AK): ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇಪ್ಪತ್ತು ವರ್ಷದಿಂದ ಜೆಡಿಎಸ್ನೊಂದಿಗೆ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಕಾಂಗ್ರೆಸ್ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಇದೆ. ಯಾವತ್ತೂ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಮಾನಸಿಕ ಕಿರುಕುಳ ಹತ್ತಿರದಿಂದ ನೋಡಿದ್ದೇನೆ’ ಎಂದು ತಿಳಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕೃತವಾದ ಬಳಿಕ ನಮ್ಮ ಮುಂದಿನ ನಿರ್ಧಾರ ಮಾಡುತ್ತೇನೆ ಎಂದರು.