ಮುಂಬೈ, ಅ 06 (DaijiworldNews/HR): ಸತತ ನಾಲ್ಕನೇ ತಿಂಗಳಿನಲ್ಲಿಯೂ ಆರ್ಬಿಐನ ಹಣಕಾಸು ನೀತಿ ಸಮಿತಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ತಿಳಿಸಿದೆ.
ಈ ಕುರಿತು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದ್ದು,ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಇನ್ನು ಏಪ್ರಿಲ್, ಜೂನ್ ಹಾಗೂ ಆಗಸ್ಟ್ ನಲ್ಲಿ ನಡೆದ ಆರ್ ಬಿಐನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಯ್ದುಕೊಂಡಿದ್ದು ಈ ಬಾರಿ ಕೂಡ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.