ನವದೆಹಲಿ, ಅ 07 (DaijiworldNews/HR): ಯೂಟ್ಯೂಬ್, ಎಕ್ಸ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಚಾರಗಳನ್ನು ತೆಗೆದುಹಾಕುವಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ.
ಲೈಂಗಿಕ ದೌರ್ಜನ್ಯದ ವಿಚಾರಗಳನ್ನು ತೆಗೆದುಹಾಕದಿದ್ದಲ್ಲಿ ಸಾಮಾಜಿಕ ಜಾಲತಾಣಗಳ ಸಂಸ್ಥೆಗಳು ತೆಗೆದುಕೊಳ್ಳದಿದ್ದಲ್ಲಿ ಐಟಿ ಕಾಯಿದೆಯ ಸೆಕ್ಷನ್ 79ರ ಅಡಿಯಲ್ಲಿ ನೋಟಿಸ್ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.
ಇನ್ನು ಈ ನಿಯಮಗಳನ್ನು ಅನುಸರಿಸದಿರುವುದು ಐಟಿ ಕಾಯ್ದೆ 2021ರ 3(1) (ಬಿ) ಮತ್ತು ನಿಯಮ 4 (4)ರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.