ಚಿಕ್ಕೋಡಿ,ಅ 07 (DaijiworldNews/AK): ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಬಹಳಷ್ಟು ಮಹಿಳೆಯರಿಗೆ ಇನ್ನೂ ಗೃಹಲಕ್ಷ್ಮಿಯ 2,000 ರೂ. ಹಣ ಸಿಕ್ಕೇ ಇಲ್ಲ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿ 5 ಗ್ಯಾರಂಟಿ ಜಾರಿ ಮಾಡಿದೆ.ಆದ್ರೆ ಇನ್ನೂ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು
ಸರ್ಕಾರ ಹೇಳಿದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯಂತೆ 100% ಯೋಜನೆಯನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಜನರಿಗೆ ನ್ಯಾಯ ಕೊಟ್ಟಂತೆ ಆಗುತ್ತೆ ಎಂದು ಹೇಳಿದ್ದಾರೆ.