ಶಿವಮೊಗ್ಗ, ಅ 08 (DaijiworldNews/HR): ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿ ಒಂದೇ ಮನೆಯ ಮೂವರು ಸಜೀವ ದಹನವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವ ಬೆಂಕಿಗೆ ಆಹುತಿಯಾಗಿದ್ದು, ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.