ನವದೆಹಲಿ, ಅ 09 (DaijiworldNews/MS): ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಲಿದೆ.
ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಹೀಗೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲು ಚುನಾವಣಾ ಆಯೋಗ ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿ ಕರೆದಿದೆ.
ಈ ಸಂಬಂಧ ಇಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ತೆಲಂಗಾಣ, ರಾಜಸ್ಥಾನ, ಛತ್ತೀಸ್ಗಢ ಮತ್ತು ರಾಜಸ್ಥಾನದ ಶಾಸಕಾಂಗ ಸಭೆಗಳ ಅವಧಿಯು ಮುಂದಿನ ವರ್ಷದ ಜನವರಿಯಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತದೆ. ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಆಡಳಿತ ನಡೆಸುತ್ತಿದ್ದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.