ಚೆನ್ನೈ, ಅ 09 (DaijiworldNews/AK):ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೆಂಥಿಲ್ ಬಾಲಾಜಿಯನ್ನು ಪುಳಲ್ ಜೈಲಿನಲ್ಲಿ ಇರಿಸಲಾಗಿತ್ತು. ಈ ಹಿಂದೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸೆಂಥಿಲ್ ಬಾಲಾಜಿಗೆ ವೈದ್ಯರು ಆ್ಯಂಜಿಯೋಗ್ರಾಮ್ ಶಸ್ತ್ರಚಿಕಿತ್ಸೆ ನಡೆಸಿದ್ದರು.
ಇದೀಗ ಮತ್ತೆ ಅನಾರೋಗ್ಯದ ಕಾರಣ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.