ಬೆಂಗಳೂರು, ಅ 11 (DaijiworldNews/HR): ಶಾಸಕ ಮುನಿರತ್ನ ಅವರು ಪ್ರತಿಭಟನೆ ಮಾಡುತ್ತಿದ್ದು ಇದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ ಸೂಚಿಸಿ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿರುವ ಹಿನ್ನೆಲೆ ಶಾಸಕರು ತಮ್ಮ ಉಪವಾಸ ಧರಣಿಯನ್ನು ಹಿಂಪಡೆದಿದ್ದಾರೆ.
126 ಕೋಟಿ ರೂ. ಅನುದಾನ ವಾಪಸ್ ಖಂಡಿಸಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಉಪವಾಸ ಧರಣಿ ನಡೆಸಿದ್ದು, ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಅನುದಾನ ರದ್ದುಪಡಿಸಿ ಸೇಡಿನ ರಾಜಕೀಯ ಮಾಡಿದ್ದಾರೆ. ಸಿಎಂ ಜೊತೆ ಮಾತನಾಡಿ ಇದನ್ನು ಸರಿ ಮಾಡುತ್ತೇನೆ. ಎಲ್ಲರಿಗೂ ಕೊಟ್ಟಂತೆ ಅನುದಾನ ಇವರಿಗೂ ಕೊಡಬೇಕು ನಾನು ಸಿಎಂ ಜೊತೆ ಮಾತನಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶಾಸಕರು ಧರಣಿ ಕೈಬಿಟ್ಟಿದ್ದಾರೆ.
ಬಳಿಕ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮುನಿರತ್ನ, ಫಲಿತಾಂಶ ಬಂದಾಗಿನಿಂದ ನನ್ನ ಕ್ಷೇತ್ರದಲ್ಲಿ ಒಬ್ಬ ಶಾಸಕನಾಗಿ ಕೆಲಸ ಮಾಡೋದು ಕಷ್ಟ ಆಗುತ್ತಿದೆ. ಪೊಲೀಸ್ ದೌರ್ಜನ್ಯ, ಅಧಿಕಾರಿಗಳ ಅಮಾನತು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.