ಶಿವಮೊಗ್ಗ, ಅ 13 (DaijiworldNews/HR): ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಅವರು 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಲೋಕಾಯುಕ್ತರ ಕೈಗೆ ಸಿಕ್ಕಬಿದ್ದಿದ್ದಾರೆ.
ಇನ್ನು ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಗೋಪಿನಾಥ್ 15 ಸಾವಿರ ಬೇಡಿಕೆ ಇಟ್ಟಿದ್ದರು. ದೂರುದಾರನಿಂದ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾ