ಧಾರವಾಡ, ಅ 16 (DaijiworldNews/Ak) : ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಆಡಿದ್ದೇ ಆಟ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.